Important points about Srinivasa Ramanujan. Srinivas Ramanujan contribution to mathematics. Srinivasa Ramanujan story in Kannada.
In this video we are going to learn life story of Srinivas Ramanujan and his contribution to Mathematics.
To get more video notes, visit our YouTube channel. This channel is very useful for all competitive exam preparation.
Watch this video for the explanation of Important points about Srinivas Ramanujan.
srinivas ramanujan life history in short
ಶ್ರೀನಿವಾಸ ರಾಮಾನುಜನ್ ಕುರಿತ ಕೆಲ ಸ್ವಾರಸ್ಯಕರ ಸಂಗತಿಗಳು
ಖ್ಯಾತ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರು ಡಿಸೆಂಬರ್ 22ರಂದು ಜನಿಸಿದರು. ಇವರ ಜನ್ಮ ದಿನವನ್ನು ರಾಷ್ಟ್ರೀಯ ಗಣಿತ ದಿನವೆಂದು ಆಚರಿಸಲಾಗುವುದು.
ಗಣಿತ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ರಾಮಾನುಜನ್ ಅವರ ಕುರಿತ ಕೆಲ ಸ್ವಾರಸ್ಯಕರ ಸಂಗತಿಗಳು ನೋಡಿ ಇಲ್ಲಿವೆ:
1. ರಾಮಾನುಜನ್ 13ನೇ ವಯಸ್ಸಿನಲ್ಲಿದ್ದಾಗಲೇ ಯಾರ ಸಹಾಯವಿಲ್ಲದೆ ಲೋನಿಯವರ ಟ್ರಿಗ್ನೋಮೆಟ್ರಿ ಲೆಕ್ಕವನ್ನು ಪೂರ್ಣಗೊಳಿಸುತ್ತಿದ್ದರು.
2. ರಾಮಾನುಜನ್ ಅವರಿಗೆ ಶಾಲೆಯಲ್ಲಿ ಯಾರೂ ಸ್ನೇಹಿತರಿರಲಿಲ್ಲ. ಇತರರು ಆಟ ಆಡುತ್ತಿದ್ದರೆ ಇವರು ಕಠಿಣ ಲೆಕ್ಕವನ್ನು ಮಗ್ನರಾಗಿರುತ್ತಿದ್ದರು.
3. ರಾಮಾನುಜನ್ ಡಿಗ್ರಿಯಲ್ಲಿ ಫೇಲ್ ಆಗಿದ್ದರು. ಗಣಿತದಲ್ಲಿ ಮೇಧಾವಿಯಾಗಿದ್ದ ಅವರು ಕಲಾ ವಿಭಾಗದ ವಿಷಯಗಳಲ್ಲಿ ಉತ್ತೀರ್ಣರಾಗಲು ಅಸಮರ್ಥರಾಗಿದ್ದರು.
4. ಲೆಕ್ಕವನ್ನು ಮಾಡಲು ಪೇಪರ್ ದುಬಾರಿಯೆಂದು ಸ್ಲೇಟ್‌ನಲ್ಲಿ ಬರೆದು ಅಭ್ಯಾಸ ಮಾಡುತ್ತಿದ್ದರು.
5. ಜಿ ಹೆಚ್ ಹಾರ್ಡಿ ಜತೆ ಇಂಗ್ಲೆಂಡ್‌ಗೆ ಹೋಗಿದ್ದ ರಾಮನುಜನ್ ಅವರಿಗೆ ಅಲ್ಲಿಯ ವಾತಾವರಣ ಹಿಡಿಸಲಿಲ್ಲ, ಕಾಯಿಲೆ ಬಿದ್ದರು. ಇವರು ಅಲ್ಲಿ ವರ್ಣಬೇಧವನ್ನೂ ಅನುಭವಿಸಿದ್ದರು.
ಶ್ರೀನಿವಾಸ ರಾಮಾನುಜನ್ ಜೀವನ ಚರಿತ್ರೆ
6. ಅವರು 1887 ರಲ್ಲಿ ಭಾರತದ ಈರೋಡ್‌ನಲ್ಲಿ ಜನಿಸಿದರು. ಗಣಿತಶಾಸ್ತ್ರದಲ್ಲಿ ಯಾವುದೇ ಔಪಚಾರಿಕ ತರಬೇತಿಯನ್ನು ಹೊಂದಿರದಿದ್ದರೂ, ರಾಮಾನುಜನ್ ಅವರು ತಮ್ಮ ಸ್ವಯಂ-ಅಧ್ಯಯನ ಮತ್ತು ಅಂತಃಪ್ರಜ್ಞೆಯ ಮೂಲಕ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದರು.
7. ಶ್ರೀನಿವಾಸ ರಾಮಾನುಜನ್ ಜೀವನ ಚರಿತ್ರೆ ಚಲಚಿತ್ರವಾಗಿ ಅರ್ಪಣೆ:
ಶ್ರೀನಿವಾಸ ರಾಮಾನುಜನ್ ಜೀವನ ಚರಿತ್ರೆಯನ್ನು ಆಧರಿಸಿ 2015ರಲ್ಲಿ ದಿ ಮ್ಯಾನ್ ಹು ನ್ಯೂ ಇನ್ಫಿನಿಟಿ ಚಲನಚಿತ್ರ ಬಿಡುಗಡೆಯಾಯಿತು. ಇದು ರಾಮಾನುಜನ್ ಒಬ್ಬ ಗಣಿತ ತಜ್ಞರಾಗಿ ಹೇಗೆ ಜೀವನ ನಡೆಸಿದ್ದರು ಮತ್ತು ಗಣಿತದ ಸಿದ್ಧಾಂತಗಳೆಡೆಗೆ ಪ್ರಯಾಣ ಹೇಗಿತ್ತು ಎಂಬುದನ್ನು ಉಲ್ಲೇಖಿಸುತ್ತದೆ.
8. ರಾಮಾನುಜನ್ ವಿವರಿಸಿದಂತೆ 1729 ಎಂಬುದು ಎರಡು ವಿಭಿನ್ನ ಘನಗಳ ಮೊತ್ತವನ್ನು 2 ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಬಹುದಾದ ಚಿಕ್ಕ ಸಂಖ್ಯೆಯಾಗಿದೆ ಎಂದು ತಿಳಿಸಿದರು. ತದನಂತರ 1729 ಅನ್ನು ಹಾರ್ಡಿ-ರಾಮಾನುಜನ್ ಸಂಖ್ಯೆ ಎಂದೇ ಜನಜನಿತವಾಯಿತು.
9. 14ನೇ ವಯಸ್ಸಿನಲ್ಲಿ ಮನೆಯಿಂದ ಓಡಿ ಹೋಗಿ ಮದ್ರಾಸ್ನಲ್ಲಿರುವ ಪಚ್ಚಯಪ್ಪ ಕಾಲೇಜಿಗೆ ಸೇರಿದರು. ಗಣಿತದಲ್ಲಿ ಮಾತ್ರ ಜಾಣರಾಗಿದ್ದ ಇವರು ಇತರ ವಿಷಯಗಳಲ್ಲಿ ಹಿಂದುಳಿದರು. ಹಾಗಾಗಿ ಪದವಿ ಪೂರೈಸಲು ಆಗಲಿಲ್ಲ. ಮನೆಯಲ್ಲಿ ಕಡುಬಡತನವಿದ್ದರೂ ರಾಮಾನುಜನ್ ಸ್ವತಃ ಗಣಿತದಲ್ಲಿ ಅಧ್ಯಯನ ಆರಂಭಿಸಿದರು. 11. ಶ್ರೀನಿವಾಸ ರಾಮಾನುಜನ್ನರ ಬಗ್ಗೆ ಬರೆಯುತ್ತ ಜವಾಹರಲಾಲ್ ನೆಹರೂರವರು ತಮ್ಮ “ಡಿಸ್ಕವರಿ ಆಫ್ ಇಂಡಿಯಾ”ದಲ್ಲಿ ಹೀಗೆ ನುಡಿಯುತ್ತಾರೆ: “ಭಾರತದಲ್ಲಿ ಗಣಿತದ ವಿಚಾರದಲ್ಲಿ, ಇತ್ತೀಚಿಗಿನ ಒಬ್ಬರು ಅಸಾಧಾರಣ ವ್ಯಕ್ತಿಯನ್ನು ಕುರಿತು ಯೋಚಿಸುವುದು ಅನಿವಾರ್ಯವಾಗುವಂತೆ ಮಾಡುತ್ತದೆ. ಅವರೇ ಶ್ರೀನಿವಾಸ ರಾಮಾನುಜನ್.
ದಕ್ಷಿಣ ಭಾರತದ ಒಂದು ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿ ಸೂಕ್ತ ವಿದ್ಯಾಭ್ಯಾಸಕ್ಕೆ ಅವಕಾಶಗಳಿಲ್ಲದೆ ಅವರು ಮದ್ರಾಸ್ ಪೋರ್ಟ್ ಟ್ರಸ್ಟ್‌ನಲ್ಲಿ ಒಬ್ಬ ಕಾರಕೂನರಾದರು. ಆದರೆ ಅವರು ಸಹಜ ಪ್ರತಿಭೆಯ ಯಾವುದೋ ತಡೆಯಲಾಗದ ಲಕ್ಷಣಗಳಿಂದ ಬುದ್ಬುದಿಸುತ್ತಿದ್ದರು; ಸಂಖ್ಯೆ ಹಾಗೂ ಸಮೀಕರಣಗಳೊಂದಿಗೆ ಅವರು ಬಿಡುವಿನ ಸಮಯದಲ್ಲಿ ಆಟವಾಡುತ್ತಿದ್ದರು. ಮುಂದೆ ಅವರು ಕೇಂಬ್ರಿಜ್ಗೆ ತೆರಳಿ ಅಲ್ಲಿ ಅಲ್ಪಾವಧಿಯಲ್ಲೇ ಮೂಲಭೂತ ಮೌಲ್ಯದ ಹಾಗೂ ವಿಸ್ಮಯಕರ ಸ್ವಂತಿಕೆಯ ಕಾರ್ಯವೆಸಗಿದರು. ಇಂಗ್ಲೆಂಡಿನ ರಾಯಲ್ ಸೊಸೈಟಿ ತನ್ನ ನಿಯಮಗಳನ್ನು ಭಾಗಶಃ ಸಡಿಲಿಸಿ ಅವರನ್ನು ಜೊತೆಗಾರನಾಗಿ ಆಯ್ಕೆ ಮಾಡಿತು. ಪ್ರೊಫೆಸರ್ ಜೂಲಿಯನ್ ಹಕ್ಸ್ಲಿಯವರು, ನಾನು ತಿಳಿದಿರುವಂತೆ ಎಲ್ಲೋ ಒಂದೆಡೆ ರಾಮಾನುಜರನ್ನು ಈ ಶತಮಾನದ ಶ್ರೇಷ್ಠತಮ ಗಣಿತಜ್ಞ” ಎಂದಿದ್ದಾರೆ.
srinivas ramanujan life history iN KANNADA
12. ರಾಮಾನುಜನ್ ಅವರು ಎಫ್. ಎ ತರಗತಿಗಳಿಗೆ ಸೇರಿದಾಗ ಅವರಿಗೆ ಗಣಿತದ ಹೊರತಾಗಿ ಇನ್ನ್ಯಾವುದೇ ವಿಷಯಗಳ ಕುರಿತಾಗಿ ಕಿಂಚಿತ್ತೂ ಆಸಕ್ತಿ ಹುಟ್ಟಲಿಲ್ಲ.
ಈ ನಿರಾಸಕ್ತಿ ಮತ್ತು ನಿರಂತರ ಅವರ ಜೊತೆಗೂಡಿದ್ದ ಅನಾರೋಗ್ಯಗಳು ಅವರ ಓದನ್ನು ಅಲ್ಲಿಗೇ ಮೊಟಕುಗೊಳಿಸಿಬಿಟ್ಟವು. ಇದೇ ನೆಪವಾಗಿ ಅವರು ಯಾವಾಗಲೂ ಗಣಿತದಲ್ಲೇ ಮುಳುಗಿಬಿಟ್ಟರು. ಇದು ಮನೆಯವರಿಗೆ ಇಷ್ಟವಾಗಲಿಲ್ಲ. ಜೀವನದ ದಾರಿ ಬದಲಾಗಲಿ ಎಂದು ವಿವಾಹ ಏರ್ಪಡಿಸಿದರು.
13. ಮದುವೆ ಒಂದು ಬದಲಾವಣೆಯನ್ನು ತಂದಿತು. ಇನ್ನು ಮುಂದೆ ತಾನು ಹೆತ್ತವರಿಗೆ ಹೊರೆಯಾಗಬಾರದೆಂದು ರಾಮಾನುಜನ್ನರು ನಿರ್ಧರಿಸಿದರು.
ಇವರ ಮೇಧಾವಿತನದ ಕುರಿತಾದ ಅಭಿಮಾನವುಳ್ಳ ಹಿರಿಯರ ಶಿಫಾರಸ್ಸಿನಿಂದ ಮದ್ರಾಸಿನಲ್ಲಿ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಅವರಿಗೆ ಕೆಲಸ ದೊರೆಯಿತಾದರೂ ಅದು ಕೇವಲ ಎರಡು ತಿಂಗಳಮಟ್ಟಿಗೆ ಮಾತ್ರ ಇತ್ತು.
ಪುನಃ ಹಸಿದ ಹೊಟ್ಟೆಯ ಬಡತನ, ಅನಾರೋಗ್ಯ ಅವರಿಗೆದುರಾಯಿತು. ಸ್ವಲ್ಪ ದಿನ ಮನೆಯ ಪಾಠಮಾಡಿದರು. ಈ ನಡುವೆ ತಮ್ಮ ಗಣಿತದ ಕುರಿತಾದ ಆಲೋಚನೆಗಳನ್ನು ದಾಖಲಿಸುವ ಕೆಲಸವನ್ನು ಮಾತ್ರ ನಿಲ್ಲಿಸಲಿಲ್ಲ.
14. ಪೋರ್ಟ್ ಟ್ರಸ್ಟಿನಲ್ಲಿನ ಕೆಲಸ ಶ್ರೀನಿವಾಸ ರಾಮಾನುಜನ್ ಮತ್ತು ಅವರ ಕುಟುಂಬಕ್ಕೆ ಅರೆಹೊಟ್ಟೆಯನ್ನು ತುಂಬಿಸುವಷ್ಟು ಮಾತ್ರದ್ದಾಗಿತ್ತು.
ಕಡುಬಡತನ ಮತ್ತು ಎಲ್ಲ ತರಹದ ಸಂಕಷ್ಟವಿದ್ದರೂ ರಾಮಾನುಜನ್ ಎಂದೂ ತಾಳ್ಮೆಗೆಡುತ್ತಿರಲಿಲ್ಲ.
ಅವರು ಮದ್ರಾಸಿನಲ್ಲಿ ಟ್ರಿಪ್ಲಿಕೇನಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಒಂದು ರಾತ್ರಿ ಖಗೋಳ ಪ್ರಪಂಚದ ವಿಸ್ಮಯಗಳ ಕುರಿತು ಗೆಳೆಯನೊಡನೆ ಮಾತನಾಡುತ್ತಿದ್ದರು.
ಅದನ್ನು ತಡೆಯಲು ಯಾರೋ ಹಠಾತ್ತಾಗಿ ರಾಮಾನುಜನ್ನರ ತಲೆಯ ಮೇಲೆ ಗಡಿಗೆ ತುಂಬಾ ನೀರು ಸುರಿದರು. ಕೋಪಾವಶೇಶದಲ್ಲಿ ಸಿಡಿಯುವ ಬದಲು, ರಾಮಾನುಜನ್ ನಗುತ್ತ ಅಂದರು:
“ದೇವರ ದಯೆ, ನನಗೆ ಗಂಗಾಸ್ನಾನವಾಯಿತು. ಇನ್ನೂ ಜಾಸ್ತಿ ಇದ್ದಾರೆ ಸಂತೋಷ.”. ಶಾಂತ ಮತ್ತು ಏಕಾಗ್ರಚಿತ್ತದಿಂದ ರಾಮಾನುಜನ್ ತಮ್ಮ ಕೆಲಸ ಮುಂದುವರಿಸಿದರು.
15. ಪ್ರೊ. ಹಾರ್ಡಿ ಹೇಳುತ್ತಾರೆ: “ರಾಮಾನುಜನ್ ಅವರಲ್ಲಿ ಪರಮಾದ್ಭುತವಾದುದೆಂದರೆ ಬೀಜಗಣಿತದ ಸೂತ್ರಗಳು.
ಅನಂತ ಶ್ರೇಣಿಗಳ ಪರಿವರ್ತನೆ ಮುಂತಾದವುಗಳಲ್ಲಿದ್ದ ಅವರ ಅಂತರ್ದೃಷ್ಟಿ. ಈ ವಿಷಯಗಳಲ್ಲಿ ಅವರಿಗೆ ಸಮನಾದವರನ್ನು ಖಂಡಿತವಾಗಿಯೂ ನಾನು ಕಂಡಿಲ್ಲ.
ಅವರನ್ನು ಅಯ್ಳರ್ ಅಥವಾ ಜುಕೊಬಿಯಂತಹ ಸಾರ್ವಕಾಲಿಕ ಶ್ರೇಷ್ಠರೊಂದಿಗೆ ಮಾತ್ರ ಹೋಲಿಸಲು ಸಾಧ್ಯ. ರಾಮಾನುಜನ್ ಅವರ ಸ್ಮರಣ ಶಕ್ತಿ, ಸಹನೆ, ಗಣಿಸುವ ಸಾಮರ್ಥ್ಯಗಳೊಂದಿಗೆ ಸಾರ್ವತ್ರೀಕರಣ ಶಕ್ತಿ. ಸ್ವರೂಪ ಜ್ಞಾನ, ಆಧಾರ ಭಾವನೆಗಳನ್ನು ಕ್ಷಿಪ್ರವಾಗಿ ಬದಲಾಯಿಸುವ ಚಾಕಚಕ್ಯತೆ ಇವು ಅನೇಕ ವೇಳೆ ದಂಗುಬಡಿಸುತ್ತಿದ್ದವು. ರಾಮಾನುಜನ್ ಅವರದೇ ಆದ ಈ ಕ್ಷೇತ್ರದಲ್ಲಿ ಆ ಕಾಲದಲ್ಲಿ ಅವರಿಗೆ ಸರಿಸಾಟಿಗಳಿಲ್ಲದಂತೆ ಮಾಡಿದವು”
16. ಪ್ರೊ. ಪಿ. ವಿ. ಶೇಷು ಅಯ್ಯರ್ ಅಂತಹ ಹಿರಿಯರು ಮತ್ತು ಹಿತಚಿಂತಕರು ಟ್ರಿನಿಟಿ ಕಾಲೇಜಿನ ಫೆಲೋ ಆಗಿದ್ದ ಪ್ರೊ. ಜಿ. ಹೆಚ್ ಹಾರ್ಡಿ ಮತ್ತು ಕೇಂಬ್ರಿಜ್ ಗಣಿತ ಉಪನ್ಯಾಸಕರಾಗಿದ್ದ ಕ್ಯಾಲೆ ಅವರಿಗೆ ರಾಮಾನುಜನ್ ತಮ್ಮ ಗಣಿತೀಯ ಶೋಧನೆಗಳನ್ನು ತಿಳಿಸಬೇಕೆಂದು ಒತ್ತಾಯಿಸಿದರು.
ಇದನ್ನು ಮಾಡಲು ಮೊದಲು ಅವರಿಗೆ ಮನಸ್ಸಿರಲಿಲ್ಲ. ಆದರೆ ಒತ್ತಾಯ ಜಾಸ್ತಿಯಾದಾಗ ಅವರು ಪ್ರೊ. ಹಾರ್ಡಿಯವರಿಗೆ ಬರೆಯಲು ನಿರ್ಧರಿಸಿದರು.
ಹೀಗೆ ಕ್ರಮೇಣ ಅವರ ಜೀವನವನ್ನೇ ಬದಲಿಸಿದ ಮತ್ತು ಭಾರತವನ್ನು ಪ್ರಪಂಚದ ಗಣಿತೀಯ ನಕ್ಷೆಯಲ್ಲಿ ಸೇರಿಸಿದ ಪತ್ರ ವ್ಯವಹಾರ ಪ್ರಾರಂಭಗೊಂಡಿತು.
ತಮ್ಮ ಮೊದಲ ಪತ್ರದಲ್ಲೇ ರಾಮಾನುಜನ್ ನೂರಕ್ಕೂ ಹೆಚ್ಚು ಪ್ರಮೇಯಗಳನ್ನು ವಿವರಿಸಿದ್ದರು. ಈ ಚಿಂತನೆಗಳು ಕೇಂಬ್ರಿಜ್ನಲ್ಲಿ ಹೊಸ ಸಂಚಲನವನ್ನೇ ಉಂಟುಮಾಡಿತು. ಕ್ರಮೇಣದಲ್ಲಿ ಶ್ರೀನಿವಾಸನ್ ಕೆಂಬ್ರಿಡ್ಜ್ಗೆ ಬಂದಿಳಿದರು.
ರಾಮಾನುಜಾಚಾರ್ಯರ ಜೀವನ ಚರಿತ್ರೆ
17. ಮಹಾನ್ ಗಣಿತಜ್ಞರಾದ ಶ್ರೀನಿವಾಸ ರಾಮಾನುಜನ್ ಅವರು ತಮ್ಮ ಜೀವನದ ಅಂತ್ಯದಲ್ಲಿ ಬಹಳ ಅನಾರೋಗ್ಯಕ್ಕೆ ಒಳಗಾದರು.
ಅವರು ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರ ಆರೋಗ್ಯವು ಹದಗೆಡುತ್ತಲೇ ಇತ್ತು.
ಇದರಿಂದಾಗಿ ಅವರು 26 ಏಪ್ರಿಲ್ 1920 ರಂದು ತಮ್ಮ 33 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಕೊನೆಯುಸಿರೆಳೆದರು.