Shree Krishna upadeshagalu in Kannada

ಶ್ರೀ ಕೃಷ್ಣ ಉಪದೇಶಗಳು | Shree Krishna upadeshagalu in Kannada | Kannada Motivational quotes. Subscribe to get more videos.

This video about Shree Krishna upadeshagalu in kannada. Shri Krishna bhodanegalu. Krishnavaani. Shree Krishna quotes in kannada. Krishnana vachanagalu. Krishna sandhesha in kannada.  Shree Krishna nitigalu.

Shree Krishna niti bhodanegalu. Krishna quotes. Shree Krishnana nudimuttugalu. Motivational video. Motivational quotes by Shree Krishna. Shree Krishna thoughts. Shree Krishna`s words in kannada. Krishna vani kannada. Radha Krishna.

Watch this video for the explanation of Shree Krishna upadeshagalu in Kannada.

Shree Krishna sandhesha in kannada

ಶ್ರೀ ಕೃಷ್ಣ ಉಪದೇಶಗಳು

1. ನಿನ್ನ ಬಗ್ಗೆ ನೀನು ಎಂದೂ ಅತಿಯಾದಂತಹ ಅಹಂಕಾರ ತಾಳಬೇಡ

2. ಭಗವಂತ ನಮ್ಮ ಬದುಕಿನಲ್ಲಿ ಉಸಿರು ಕೊಟ್ಟು ಬದುಕಿಸುವ ಅಮೃತ. ಆಯಸ್ಸು ಮುಗಿದಾಗ ಉಸಿರು ನಿಲ್ಲಿಸಿ ಕರೆಸಿ ಕೊಳ್ಳುವವನೂ ಅವನೆ.

3. ದುಷ್ಟರಿಂದ ದೂರವಿರು ಆದರೆ ದ್ವೇಷಿಸಬೇಡ.

4. ನಿಮ್ಮನ್ನು ಕೋಪದ ಕೈಗೆ ಎಂದೂ ಕೊಡಬೇಡಿ. ಕೋಪಬಂದಾಗ-ಕೋಪ ಇಳಿಯುವ ತನಕ ಮೌನವನ್ನಾಚರಿಸಿದರೆ ಅದರಿಂದಾಗುವ ಅನಾಹುತ ತಪ್ಪುತ್ತದೆ.

5. ಇನ್ನೊಬ್ಬರಿಗೆ ಕೆಟ್ಟದಾಗಲಿ ಎಂದು ಕನಸಿನಲ್ಲೂ ಬಯಸಬೇಡ.

6. ಮೋಹದ ಬಲೆಯಲ್ಲಿ ಸಿಕ್ಕಿಕೊಂಡವರು; ಕಾಮದ ತೀಟೆಗಳಲ್ಲಿ ಮೈಮರೆತವರು ಕೊಳಕು ನರಕದಲ್ಲಿ ಬಿದ್ದು ನರಳುತ್ತಾರೆ.

7. ಕಾಮ-ಕ್ರೋಧ-ಲೋಭ ಎನ್ನುವುದು ನಮ್ಮನ್ನು ಅಧಃಪಾತಕ್ಕೆ ತಳ್ಳುವ ಮೂರು ನರಕದ ಬಾಗಿಲುಗಳು, ಅವುಗಳಿಂದ ದೂರವಿರು.

8. ಭಗವಂತನ ಪೂಜೆಗೆ ಬೇಕಾಗಿರುವುದು ಧನ-ಕನಕವಲ್ಲ. ಕೇವಲ ನಿಷ್ಕಾಮ ಭಕ್ತಿ.

9. ಯಾರು ಎಲೆಯನ್ನೋ, ಹೂವನ್ನೋ, ನೀರನ್ನೋ ಭಕ್ತಿಯಿಂದ ನನಗೆ ನೀಡುತ್ತಾನೆ ನನ್ನಲ್ಲೇ ಬಗೆಯಿಟ್ಟ ಅವನ ಭಕ್ತಿಯ ಆ ಕೊಡುಗೆಯನ್ನು ನಾನು ನಲ್ಮೆಯಿಂದ ಕೊಳ್ಳುತ್ತೇನೆ.

10. ಪೂಜೆಯಲ್ಲಿ ನಿನಗೆ ಬೇಡಲು ಇರುವ ಅಧಿಕಾರ ಕೇವಲ ‘ಮೋಕ್ಷ ಮತ್ತು ಭಗವಂತ’.

11. ಸ್ಥಿರವಲ್ಲದ, ಸುಖವಿಲ್ಲದ ನರಜನ್ಮ ಬಂದಾಗ ನನ್ನನ್ನು ಆರಾಧಿಸು.

Shree Krishnana nudimuttugalu

Shree Krishna upadeshagalu in Kannada

12. ನಾನು ಪಂಡಿತ’ ಎನ್ನುವ ಅಹಂಕಾರ ತಲೆಗೆ ಬಂದರೆ ಅಂತವನು ಮಹಾ ದರಿದ್ರ ಎನಿಸುತ್ತಾನೆ! ಅಹಂಕಾರದ ಮರಿ ‘ಅಸೂಯೆ’. ಈ ಅಸೂಯೆ ನಮ್ಮನ್ನು ಸುಡುವ ಬೆಂಕಿ.

13. ನಾಲ್ಕು ಬಗೆಯ ಜನರು ನನ್ನಲ್ಲಿ ಭಕ್ತಿ ಇಡುತ್ತಾರೆ: ಸಂಕಟದಲ್ಲಿರುವವರು, ಸಿರಿಯನ್ನು ಬಯಸುವವರು, ತಿಳಿಯ ಬಯಸುವವನು ಮತ್ತು ತಿಳಿದವನು.

14. ಯಾರಲ್ಲೂ ಯಾವ ಕ್ರಿಯೆಯೂ ಭಗವಂತನ ಪ್ರೇರಣೆ ಇಲ್ಲದೆ ಆಗುವುದಿಲ್ಲ.

 15. ಪ್ರಪಂಚದಲ್ಲಿ ಅನೇಕ ವಿಧದ ಜನರಿರುತ್ತಾರೆ.

ಸುಹೃತರು-ಅಂದರೆ ಒಳ್ಳೆಯ ಹೃದಯ ಉಳ್ಳವರು. ಯಾವ ಪ್ರತ್ಯುಪಕಾರ ಬಯಸದೆ ಎಲ್ಲರಿಗೂ ಸಹಾಯ ಮಾಡುವ ಜನರಿವರು.

ಮಿತ್ರ’- ತನ್ನ ಆತ್ಮೀಯನಿಗೆ ಸದಾ ಸಹಾಯ ಮಾಡುವವ, ನಾವು ತಪ್ಪಿದಾಗ ನಮ್ಮನ್ನು ತಿದ್ದುವವನೀತ.

ಆರಿಗಳು: ಕೊಲ್ಲುವ ಕೆಟ್ಟ ಶತ್ರುತ್ವ ಸಾಧಿಸುವ ಇವರಿಗೆ ದ್ವೇಷಿಸಲು ಕಾರಣ ಬೇಡ.

ಉದಾಸೀನರು: ಇವರು ಒಳ್ಳೆಯದಕ್ಕೂ ಇಲ್ಲ ಕೆಟ್ಟದಕ್ಕೂ ಇಲ್ಲ.

ಮಧ್ಯಸ್ಥ: ಒಳ್ಳೆಯದು ಮಾಡಿದಾಗ ಒಳ್ಳೆಯದು, ಕೆಟ್ಟದ್ದು ಮಾಡಿದಾಗ ಕೆಟ್ಟದ್ದು ಮಾಡುವವ.

ದ್ವೇಷ್ಯ: ಒಬ್ಬರನ್ನು ಕಂಡು ಸಹಿಸದವ

ಕೊನೆಯದಾಗಿ ಬಂಧುಗಳು.