Wonderful history of Kalyana Karnataka essay

Wonderful history of Kalyana Karnataka essay. Short essay on Kalyana Karnataka amazing history. ಕಲ್ಯಾಣ ಕರ್ನಾಟಕದ ಅದ್ಭುತ ಇತಿಹಾಸ. Essay on Hyderabad Karnataka liberation day.

In this post we are going to discuss Speech on history of Kalyana Karnataka. Kalyana Karnataka adbhuta itihas prabhanda. How to write an essay on Kalyana Karnataka?

To get more video notes of essay, visit our YouTube channel. This channel is very useful for all students.

Wonderful history of Kalyana Karnataka essay

Essay on Hyderabad Karnataka liberation day in Kannada

ಕಲ್ಯಾಣ ಕರ್ನಾಟಕದ ಅದ್ಭುತ ಇತಿಹಾಸ:

ಪೀಠಿಕೆ:

1947 ಆಗಸ್ಟ್‌ 15ರಂದು ಭಾರತ ದೇಶ ಸ್ವತಂತ್ರವಾಯಿತು. ದೇಶದ ಹಲವು ರಾಜರು ಭಾರತದ ಒಕ್ಕೂಟಕ್ಕೆ ತಮ್ಮ ರಾಜ್ಯವನ್ನು ಸೇರಿಸಿದರು. ಆದರೆ ಹೈದರಾಬಾದ್‌ ಪ್ರಾಂತ್ಯದ ರಾಜಾ ನಿಜಾಮ (ನಿಜಾಮ್ ಮೀರ್ ಒಸ್ಮಾನ್ ಅಲಿ ಖಾನ್), ಒಕ್ಕೂಟಕ್ಕೆ ಸೇರಲು ಒಪ್ಪದೆ ಸ್ವತಂತ್ರ ಆಡಳಿತ ನಡೆಸುವುದಾಗಿ ಘೋಷಿಸಿಕೊಂಡಿದ್ದರು. ಇದರಿಂದಾಗಿ ಹೈದರಾಬಾದ್‌ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಸ್ವತಂತ್ರವಾಗಲಿಲ್ಲ. ನಿಜಾಮರ ನಿರ್ಧಾರ ಹೈದರಾಬಾದ್ ಪ್ರಾಂತ್ಯದ ಜನರನ್ನು ರೊಚ್ಚಿಗೆಬ್ಬಿಸಿತು‌. ಭಾರತ ಒಕ್ಕೂಟಕ್ಕೆ ಸೇರಿಸಲು ಈ ಭಾಗದಲ್ಲಿ ಮತ್ತೊಂದು ಸ್ವಾತಂತ್ರ್ಯದ ಚಳುವಳಿ ನಡೆಯಿತು. ಅಲ್ಲಿಯೂ ಸಾಕಷ್ಟು ಜೀವಗಳು ಬಲಿಯಾದವು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ಭಾರತ ದೇಶಕ್ಕೆ 1947 ಅಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೆ ಹೈದರಾಬಾದ್ ಪ್ರಾಂತ್ಯಕ್ಕೆ (Hyderabad Karnataka) ಒಂದು ವರ್ಷ ತಡವಾಗಿ, ಅಂದರೆ 1948 ಸೆಪ್ಟೆಂಬರ್ 17 ರಂದು ಸ್ವಾತಂತ್ರ್ಯ ದೊರೆಯಿತು. ಕಲ್ಯಾಣ ಕರ್ನಾಟಕ (Kalyana Karnataka) ವಿಮೋಚನೆಗೂ ಸಾಕಷ್ಟು ರಕ್ತಸಿಕ್ತವಾದ ಇತಿಹಾಸವಿದೆ.

ನಿಜಾಮರ ವಿರುದ್ಧ ಜನರ ದಂಗೆ:

ಈ ಭಾಗದ ಬಹುತೇಕರು ಭಾರತದ ಒಕ್ಕೂಟ ಸೇರುವ ಬಯಕೆ ಹೊಂದಿದ್ದರು. ಹೋರಾಟ ಕೂಡಾ ನಡೆಸಿದ್ದರು. ಅವರ‌ ಕೂಗು ಹತ್ತಿಕ್ಕಲು, ಹೋರಾಟ ಬಗ್ಗು ಬಡಿಯಲು ನಿಜಾಮ ತನ್ನ ಖಾಸಗಿ ಸೈನ್ಯ ರಜಾಕಾರಪಡೆ ಸಜ್ಜುಗೊಳಿಸಿದನು. ವಿಮೋಚನಾ ಹೋರಾಟ ಹತ್ತಿಕ್ಕಲು ತನ್ನ ಬಲಗೈ ಬಂಟ ಖಾಸಿಂ ರಜ್ವಿ ಎಂಬ ಮತಾಂಧನಿಗೆ ನಿಜಾಮ‌‌ ಸಂಪುರ್ಣ ಸ್ವತಂತ್ರ ನೀಡಿದ. 1947 ಜುಲೈ ತಿಂಗಳಲ್ಲಿ ನಿಜಾಮ, ಹೋರಾಟ ನಿರತರ ಬಂಧನಕ್ಕೆ ಆದೇಶ ಹೊರಡಿಸಿದ.

ಸ್ವಾತಂತ್ರ್ಯ ಸೇನಾನಿಗಳನ್ನು ಬಂಧಿಸಿ ನಿಜಾಮನ ಸಾರ್ವಭೌಮತ್ವ ಸಂರಕ್ಷಿಸುವ ಜವಾಬ್ದಾರಿ ಹೊತ್ತ ರಜಾಕಾರರು ಮೂರು ಸಾವಿರಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಿ ಜೈಲಿಗೆ ಹಾಕಿದರು.‌ ಜೈಲುಗಳು ತುಂಬಿ ಹೋದವು. ನಿಜಾಮನ ಈ ನಿರ್ಧಾರ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಯ್ತು. ಆಗ ಸಮಾರೋಪಾದಿಯಲ್ಲಿ ಜನರು ವಿಮೋಚನಾ ಚಳುವಳಿಗೆ ಧುಮುಕಿದರು. ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಚಳವಳಿಗಳು ನಡೆದವು.

ಹಬ್ಬದ ಹೆಸರಲ್ಲಿ‌ ಜನರನ್ನು ಸೇರಿಸಿದ ಹೋರಾಟಗಾರರು:

ನಿಜಾಮನ ರಜಾಕಾರ ಪಡೆ ವಿರುದ್ಧ ಹೋರಾಟ ತೀವ್ರ ಗತಿಯಾಯಿತು. ಕಲಬುರಗಿಯ ಕೊಲ್ಲೂರು ಮಲ್ಲಪ್ಪ, ಚಂದ್ರಶೇಖರ್ ಪಾಟೀಲ, ಡಿ.ಆರ್.ಅವರಾದಿ, ಜಗನ್ನಾಥ್ ರಾವ್ ಚಂಡ್ರಕಿ, ಚಟ್ನಹಳ್ಳಿ ವೀರಣ್ಣ, ಬೀದರ ಜಿಲ್ಲೆಯ ಎಸ್.ಬಿ.ಅವದಾನಿ, ಯಾದಗಿರಿಯ ವಿಶ್ವನಾಥ ರೆಡ್ಡಿ ಮುದ್ನಾಳ, ಕೊಪ್ಪಳದ ಜೆ. ಕೆ. ಪ್ರಾಣೇಶಾಚಾರ್, ಬಂಗಾರಶೆಟ್ಟಿ, ಚಿಟಗುಪ್ಪದ ಹಕೀಕತರಾವ್ ಸೇರಿದಂತೆ ಮೊದಲಾದವರು ಹೋರಾಟ ನಡೆಸಿದರು. ಸಾಕಷ್ಟು ಬಾರಿ ಬಂಧನಕ್ಕೊಳಗಾಗಿ ಜೈಲು ಸೇರಿ ರಜಾಕಾರರಿಂದ ಏಟು ತಿಂದರು. ಆದರೆ ಹೋರಾಟ ಮಾತ್ರ ಕೈಬಿಡಲಿಲ್ಲ. ಅಲ್ಲದೇ ಗಣೇಶೋತ್ಸವ, ವಿಜಯ ದಶಮಿ ಹಬ್ಬಗಳ ನೇಪದಲ್ಲಿ ಜನರನ್ನು ಒಂದಡೆ ಸೇರಿಸಿ ವಿಮೋಚನೆಯ ಬಗ್ಗೆ ಜನರಿಗೆ ತಿಳಿಹೇಳುವ ಕೆಲಸ ಮಾಡುತ್ತಿದ್ದರು.

Wonderful history of Kalyana Karnataka essay in Kannada

ಮರೆಯಲಾಗದ ಗೋರ್ಟಾ ಹತ್ಯಾಕಾಂಡ:

ಹೈದರಾಬಾದ್ ವಿಮೋಚನಾ ಹೋರಾಟದಲ್ಲಿ ಪ್ರಮುಖ ಘಟ್ಟವಾಗಿರೋದು 1948 ಮೇ 9ರಂದು ಬೀದರ್ ಜಿಲ್ಲೆಯ ಗೋರ್ಟಾ ಗ್ರಾಮದಲ್ಲಿ ನಡೆದ ಸ್ವಾತಂತ್ರ್ಯ ಸೇನಾನಿಗಳ ಹತ್ಯಾಕಾಂಡ. ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಬಾವುರಾವ ಪಾಟೀಲ ಹಾಗೂ ವಿಠೋಬಾ ನಿರೋಡೆ, ಗೋರ್ಟಾ ಗ್ರಾಮದಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ವೇಳೆ ರಜಾಕಾರರ ಸಹವರ್ತಿ ಆ ಧ್ವಜ ಇಳಿಸಿದ್ದಲ್ಲದೇ ಬಾವುರಾವ ಪಾಟೀಲರಿಗೆ ಅವಮಾನ ಮಾಡಿದ್ದರು. ಅಲ್ಲದೆ ಪಾಟೀಲರ ಮನೆ ಲೂಟಿ ಮಾಡಿದರು. ಅವಮಾನ, ಮನೆ ಲೂಟಿಯಿಂದ ಆಕ್ರೋಶಗೊಂಡ ಬಾವುರಾವ ಪಾಟೀಲ, ರಜಾಕಾರರ ಸಹವರ್ತಿ ಇಸಾಮುದ್ದೀನನ್ನು ಕೊಂದು ಹಾಕಿದ್ದರು. ಇಸಾಮುದ್ದೀನ್ ಕೊಲೆ ರಜಾಕಾರರನ್ನು ಕೆರಳಿಸಿತು.‌

ಗೋರ್ಟಾ ಗ್ರಾಮದ ಮಹಾದೇವಪ್ಪ ಡುಮಣಿ ಎಂಬ ಸಾಹುಕಾರರ ಮನೆ ಅಬೇಧ್ಯ ಕೋಟೆಯಾಗಿತ್ತು. ಹೀಗಾಗಿ, ಅಲ್ಲಿ ನೂರಾರು ಜನ ಸ್ವಾತಂತ್ರ್ಯ ಸೇನಾನಿಗಳು ಆಶ್ರಯ ಪಡೆಯುತ್ತಿದ್ದರು. ರಜಾಕರು ದಾಳಿ ವೇಳೆ ಅಲ್ಲಿ 800ಕ್ಕೂ ಹೆಚ್ಚು ಜನರು ಸೇನಾನಿಗಳು ಇದ್ದರು ಎನ್ನಲಾಗಿದೆ. ಇಸಾಮುದ್ದೀನ್‍ನ ಕೊಲೆ ಸೇಡನ್ನು ತೀರಿಸಿಕೊಳ್ಳಲು ಆತನ ಅಣ್ಣ ಚಾಂದ ಪಟೇಲ್‍ ರಜಾಕಾರರ ಪಡೆಯ ನೇತೃತ್ವ ವಹಿಸಿ ಗೋರ್ಟಾ ಗ್ರಾಮ ಗುರಿಯಾಗಿಸಿಕೊಂಡು ದಾಳಿ ಮಾಡಿ ಎಲ್ಲರನ್ನು ಹತ್ಯೆಗೈದ ಎಂಬ ಕರಾಳ ಇತಿಹಾಸವಿದೆ.

ಭಾರತ ಏಕೀಕರಣದ ರೂವಾರಿ ಸರ್ದಾರ ವಲ್ಲಭಭಾಯಿ ಪಟೇಲ್ರ ಪಾತ್ರ:

ಗೋರ್ಟಾ ಗ್ರಾಮದಲ್ಲಿ ನಡೆದ ಹತ್ಯಾಕಾಂಡದಿಂದ ಸಹನೆ ಕಳೆದುಕೊಂಡ‌‌ ಸೇನಾನಿಗಳು ಪ್ರತಿಕಾರವಾಗಿ ಹಲವು ರಜಾಕಾರರನ್ನು ಕೊಂದು ಹಾಕಿದರು. ಇದರಿಂದ ಮತಾಂಧನಾಗಿದ್ದ ರಜ್ವಿಗೆ ರೊಚ್ಚಿಗೆದ್ದ, ರಕ್ತದೋಕುಳಿಯೇ ಹರಿಸಿಬಿಟ್ಟ, ಎಲ್ಲಡೆ ಕೊಲೆ, ಸುಲಿಗೆ, ಅತ್ಯಾಚಾರಗಳು‌ ಹೆಚ್ಚಾದವು. ಆಗ ಹೋರಾಟಗಾರರು ಅಂದಿನ ಗೃಹ ಮಂತ್ರಿ, ಭಾರತ ಏಕೀಕರಣದ ರೂವಾರಿ ಉಕ್ಕಿನ ಮನುಷ್ಯ ಸರದಾರ ವಲ್ಲಭಭಾಯಿ ಪಟೇಲ್ ಅವರನ್ನು ಭೇಟಿಯಾದರು. ಪಟೇಲ್ ಅವರು ಖಾಸಿಂ ರಜ್ವಿಯ ಮಟ್ಟ ಹಾಕೋಕೆ ಪ್ಲ್ಯಾನ್ ಹಾಕಿದರು. ಇವರನ್ನು ಸದೆಬಡೆಯಲು ಮಿಲಿಟರಿ ಪಡೆ ಕಾರ್ಯಾಚರಣೆಗಿಳಿಸಲು ಚಿಂತಿಸಿದ್ದರು. ಆಪರೇಷನ್‌ ಪೋಲೋ ಹೆಸರಿನಲ್ಲಿ ಮಿಟಲಿಟರಿ ಕಾರ್ಯಾಚರಣೆ ನಡೆಸಲಾಯಿತು.

ಪಟೇಲರು ಪೊಲೀಸ್ ಕಾರ್ಯಾಚರಣೆ ನಡೆಸುವ ಮೂಲಕ ನಿಜಾಮನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದರು. ತಾನಾಗಿಯೇ ತನ್ನ ಸೋಲು ಒಪ್ಪಿಕೊಂಡ ನಿಜಾಮ ಸೆಪ್ಟೆಂಬರ್.17, 1948ರಲ್ಲಿ ಭಾರತ ಒಕ್ಕೂಟಕ್ಕೆ ಹೈದ್ರಾಬಾದ್‌ ರಾಜ್ಯವನ್ನು ಒಪ್ಪಿಸಿದ. ಅಂದು ಸಹಸ್ರಾರು ಜನರ ಹೋರಾಟದ ಪರಿಣಾಮ ಇಂದು ಹೈದರಾಬಾದ್‌ ಕರ್ನಾಟಕ ಪ್ರಾಂತ್ಯಕ್ಕೆ ವಿಮೋಚನೆ ಸಿಕ್ಕು ಅಮೃತ ಮಹೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.

Speech on on Hyderabad Karnataka liberation day in Kannada

ಸರಕಾರದ ವತಿಯಿಂದ ಆಚರಣೆ:

ಆರಂಭದಲ್ಲಿ ಹೈದರಾಬಾದ್‌ ಕರ್ನಾಟಕದಲ್ಲಿ ವಿಮೋಚನಾ ದಿನವನ್ನು ಕೆಲವು ಸಂಘಟನೆಗಳು ಮಾತ್ರ ಮಾಡುತ್ತಿದ್ದವು. ಮೊದಲಿನಂದೂ ಅದು ಕರ್ನಾಟಕದ ಹಿಂದುಳಿದ ಭಾಗವೆಂದು ಪರಿಗಣಿಸಲಾಗಿತ್ತು. ಈಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಉದ್ಯೋಗ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ 371 ಜೆ ಕಾಯ್ದೆಯಡಿ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ. 2002ರಲ್ಲಿ ಆಗಿನ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣಾ ಅವರು ವಿಮೋಚನ ದಿನವನ್ನು ಸರಕಾರದ ವತಿಯಿಂದ ನಡೆಸಲು ಆರಂಭಿಸಿದ್ದಾರೆ. ಈಗ ಪ್ರತಿವರ್ಷ ರಾಜ್ಯದ ಮುಖ್ಯಮಂತ್ರಿಯವರೇ ಧ್ವಜಾರೋಹಣ ನೆರವೇರಿಸುತ್ತಾರೆ.

ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಅವಧಿಯಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ಸೆಪ್ಟೆಂಬರ್ 17, 2019 ರಂದು ‘ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಿ ಕಲ್ಯಾಣ ಕರ್ನಾಟಕ ಉತ್ಸವವನ್ನಾಗಿ ಆಚರಿಸುತ್ತಿದ್ದಾರೆ.

“ಕಲ್ಯಾಣ ಕರ್ನಾಟಕ” ಎಂಬ ಹೆಸರು ಚಾಲುಕ್ಯರಿಂದ (ಕಲ್ಯಾಣಿ ಚಾಲುಕ್ಯರು) ಬಂದಿದೆ . ಅದು ಆಗಿನ ಕಾಲದಲ್ಲಿ ಶರಣ ಚಳುವಳಿ ಹಾಗು ವಚನ ಸಾಹಿತ್ಯ ರಚನೆಯ ಕೇಂದ್ರಬಿಂದುವಾಗಿತ್ತು. ಈ ಹೆಸರು ಹೈದರಾಬಾದ್ ಕರ್ನಾಟಕಕ್ಕೆ ಸೂಕ್ತವಾದದ್ದು ಈಗ ಈ ಜಿಲ್ಲೆಗಳಿಗೆ ಹೈದರಾಬಾದ್ ಪ್ರಾಂತ್ಯಕ್ಕಾಗಲಿ, ತೆಲಂಗಾಣಕ್ಕಾಗಲಿ ಹಾಗು ಹೈದರಾಬಾದ್ ನಗರಕ್ಕಾಗಲಿ ಯಾವುದೇ ಸಂಬಂಧವೂ ಇಲ್ಲ.

ಉಪಸಂಹಾರ:

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳು ಭಾರತಕ್ಕೆ ಸೇರಿ ಇಂದಿಗೆ 75 ವರ್ಷಗಳು ಪೂರ್ಣಗೊಂಡಿವೆ. ಕಲ್ಯಾಣ ಕರ್ನಾಟಕ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆಯ ಧಾಪುಗಾಲು ಇಡುತ್ತಿದೆ. ಬಸವಾದಿ ಶರಣರ ನಾಡು, ಸೂಫಿ ಸಂತರ ಬೀಡು, ಹರಿದಾಸರ ಸಾಹಿತ್ಯದ ನೆಲೆಬೀಡಾಗಿದೆ. ಈ ಸಾಧನೆ ಹೀಗೆ ಮುಂದುವರಿದು ‘ಹಿಂದುಳಿದ ಭಾಗ ‘ ಎಂಬ ಹಣೆಪಟ್ಟಿಯನ್ನು ತೆಗೆದುಹಾಕಲು ಎಲ್ಲರೂ ಪ್ರಯತ್ನಿಸೋಣ.

Watch this video for the explanation of Wonderful history of Kalyana Karnataka essay.

Click here to download essay on Wonderful history of Kalyana Karnataka essay